Psalm 22:5
ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
Psalm 22:5 in Other Translations
King James Version (KJV)
They cried unto thee, and were delivered: they trusted in thee, and were not confounded.
American Standard Version (ASV)
They cried unto thee, and were delivered: They trusted in thee, and were not put to shame.
Bible in Basic English (BBE)
They sent up their cry to you and were made free: they put their faith in you and were not put to shame.
Darby English Bible (DBY)
They cried unto thee, and were delivered; they confided in thee, and were not confounded.
Webster's Bible (WBT)
Our fathers trusted in thee: they trusted, and thou didst deliver them.
World English Bible (WEB)
They cried to you, and were delivered. They trusted in you, and were not disappointed.
Young's Literal Translation (YLT)
Unto Thee they cried, and were delivered, In Thee they trusted, and were not ashamed.
| They cried | אֵלֶ֣יךָ | ʾēlêkā | ay-LAY-ha |
| unto | זָעֲק֣וּ | zāʿăqû | za-uh-KOO |
| thee, and were delivered: | וְנִמְלָ֑טוּ | wĕnimlāṭû | veh-neem-LA-too |
| trusted they | בְּךָ֖ | bĕkā | beh-HA |
| in thee, and were not | בָטְח֣וּ | boṭḥû | vote-HOO |
| confounded. | וְלֹא | wĕlōʾ | veh-LOH |
| בֽוֹשׁוּ׃ | bôšû | VOH-shoo |
Cross Reference
Isaiah 49:23
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
Romans 9:33
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Psalm 71:1
ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
Psalm 31:1
ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
1 Peter 2:6
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
Romans 10:11
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
Isaiah 45:17
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
Psalm 106:44
ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
Psalm 99:6
ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
Psalm 69:6
ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
Psalm 25:2
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
Judges 10:10
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
Judges 6:6
ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
Judges 4:3
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.