Bible

Psalm 25 - WEB (Kannada)

1 > To you, Yahweh, do I lift up my soul.ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

2 My God, I have trusted in you, Don't let me be shamed. Don't let my enemies triumph over me.ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.

3 Yes, no one who waits for you shall be shamed. They shall be shamed who deal treacherously without cause.ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.

4 Show me your ways, Yahweh. Teach me your paths.ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.

5 Guide me in your truth, and teach me, For you are the God of my salvation, I wait for you all day long.ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.

6 Yahweh, remember your tender mercies and your loving kindness, For they are from old times.ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.

7 Don't remember the sins of my youth, nor my transgressions. Remember me according to your loving kindness, For your goodness' sake, Yahweh.ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.

8 Good and upright is Yahweh, Therefore he will instruct sinners in the way.ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.

9 He will guide the humble in justice. He will teach the humble his way.ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.

10 All the paths of Yahweh are loving kindness and truth To such as keep his covenant and his testimonies.ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.

11 For your name's sake, Yahweh, Pardon my iniquity, for it is great.ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;

12 What man is he who fears Yahweh? He shall instruct him in the way that he shall choose.ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.

13 His soul shall dwell at ease. His seed shall inherit the land.ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.

14 The friendship of Yahweh is with those who fear him. He will show them his covenant.ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.

15 My eyes are ever on Yahweh, For he will pluck my feet out of the net.ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.

16 Turn to me, and have mercy on me, For I am desolate and afflicted.ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.

17 The troubles of my heart are enlarged. Oh bring me out of my distresses.ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.

18 Consider my affliction and my travail. Forgive all my sins.ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.

19 Consider my enemies, for they are many. They hate me with cruel hatred.ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.

20 Oh keep my soul, and deliver me. Let me not be disappointed, for I take refuge in you.ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.

21 Let integrity and uprightness preserve me, For I wait for you.ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.

22 Redeem Israel, God, Out all of his troubles.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

Kannada Bible