Psalm 66 - BBE (Kannada)
1 <To the chief music-maker. A Song. A Psalm.> Send up a glad cry to God, all the earth:ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
2 Make a song in honour of his name: give praise and glory to him.ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
3 Say to God, How greatly to be feared are your works! because of your great power your haters are forced to put themselves under your feet.ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
4 Let all the earth give you worship, and make songs to you; let them make songs to your name. (Selah.)ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
5 Come and see the works of God: he is to be feared in all he does to the children of men.ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
6 The sea was turned into dry land: they went through the river on foot: there did we have joy in him.ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
7 He is ruling in power for ever; his eyes are watching the nations: may his haters have no strength against him. (Selah.)ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
8 Give blessings to our God, O you peoples, let the voice of his praise be loud;ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.
9 Because he gives us life, and has not let our feet be moved.ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
10 For you, O God, have put us to the test: testing us by fire like silver.ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
11 You let us be put in prison; chains were put on our legs.ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
12 You let men go driving over our heads; we went through fire and through water; but you took us out into a wide place.ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
13 I will come into your house with burned offerings, I will make payment of my debt to you,ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
14 Keeping the word which came from my lips, and which my mouth said, when I was in trouble.ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
15 I will give you burned offerings of fat beasts, and the smoke of sheep; I will make offerings of oxen and goats. (Selah.)ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
16 Come, give ear to me, all you God-fearing men, so that I may make clear to you what he has done for my soul.ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
17 My voice went up to him, and I was lifted up from the underworld.ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
18 I said in my heart, The Lord will not give ear to me:ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
19 But truly God's ear has been open; he has give attention to the voice of my prayer.ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!
20 Praise be to God who has not taken away his good faith and his mercy from me.ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
Kannada Bible