Bible

Psalm 66 - WEB (Kannada)

1 > Make a joyful shout to God, all the earth!ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;

2 Sing to the glory of his name! Offer glory and praise!ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

3 Tell God, "How awesome are your deeds! Through the greatness of your power, your enemies submit themselves to you.ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

4 All the earth will worship you, And will sing to you; They will sing to your name." Selah.ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.

5 Come, and see God's deeds-- Awesome work on behalf of the children of men.ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

6 He turned the sea into dry land. They went through the river on foot. There, we rejoiced in him.ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

7 He rules by his might forever. His eyes watch the nations. Don't let the rebellious rise up against him. Selah.ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.

8 Praise our God, you peoples! Make the sound of his praise heard,ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.

9 Who preserves our life among the living, And doesn't allow our feet to be moved.ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.

10 For you, God, have tested us. You have refined us, as silver is refined.ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.

11 You brought us into prison. You laid a burden on our backs.ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;

12 You allowed men to ride over our heads. We went through fire and through water, But you brought us to the place of abundance.ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;

13 I will come into your temple with burnt offerings. I will pay my vows to you,ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

14 which my lips promised, And my mouth spoke, when I was in distress.ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.

15 I will offer to you burnt offerings of fat animals, With the offering of rams, I will offer bulls with goats. Selah.ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.

16 Come, and hear, all you who fear God. I will declare what he has done for my soul.ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.

17 I cried to him with my mouth. He was extolled with my tongue.ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

18 If I cherished sin in my heart, The Lord wouldn't have listened.ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

19 But most assuredly, God has listened. He has heard the voice of my prayer.ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!

20 Blessed be God, who has not turned away my prayer, Nor his loving kindness from me.ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

Kannada Bible