Bible

Psalm 66 - YLT (Kannada)

1 To the Overseer. -- A Song, a Psalm. Shout ye to God, all the earth.ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;

2 Praise ye the honour of His name, Make ye honourable His praise.ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

3 Say to God, `How fearful `are' Thy works, By the abundance of Thy strength, Thine enemies feign obedience to Thee.ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

4 All the earth do bow to Thee, They sing praise to Thee, they praise Thy name.' Selah.ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.

5 Come ye, and see the works of God, Fearful acts toward the sons of men.ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

6 He hath turned a sea to dry land, Through a river they pass over on foot, There do we rejoice in Him.ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

7 Ruling by His might to the age, His eyes among the nations do watch, The refractory exalt not themselves. Selah.ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.

8 Bless, ye peoples, our God, And sound the voice of His praise,ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.

9 Who hath placed our soul in life, And suffered not our feet to be moved.ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.

10 For Thou hast tried us, O God, Thou hast refined us as the refining of silver.ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.

11 Thou hast brought us into a net, Thou hast placed pressure on our loins.ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;

12 Thou hast caused man to ride at our head. We have entered into fire and into water, And Thou bringest us out to a watered place.ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;

13 I enter Thy house with burnt-offerings, I complete to Thee my vows,ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

14 For opened were my lips, And my mouth spake in my distress:ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.

15 `Burnt-offerings of fatlings I offer to Thee, With perfume of rams, I prepare a bullock with he-goats.' Selah.ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.

16 Come, hear, all ye who fear God, And I recount what he did for my soul.ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.

17 Unto Him `with' my mouth I have called, And exaltation `is' under my tongue.ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

18 Iniquity, if I have seen in my heart, The Lord doth not hear.ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

19 But God hath heard, He hath attended to the voice of my prayer.ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!

20 Blessed `is' God, Who hath not turned aside my prayer, And His loving-kindness, from me!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

Kannada Bible