Bible

Psalm 67 - WEB (Kannada)

1 > May God be merciful to us, bless us, And cause his face to shine on us. Selah.ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

2 That your way may be known on earth, And your salvation among all nations,ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.

3 Let the peoples praise you, God. Let all the peoples praise you.ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

4 Oh let the nations be glad and sing for joy, For you will judge the peoples with equity, And govern the nations on earth. Selah.ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.

5 Let the peoples praise you, God. Let all the peoples praise you.ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

6 The earth has yielded its increase. God, even our own God, will bless us.ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.

7 God will bless us. All the ends of the earth shall fear him.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

Kannada Bible