Psalm 69 - BBE (Kannada)
1 <To the chief music-maker; put to Shoshannim. Of David.> Be my saviour, O God; because the waters have come in, even to my neck.ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
2 My feet are deep in the soft earth, where there is no support; I have come into deep waters, the waves are flowing over me.ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
3 I am tired with my crying; my throat is burning: my eyes are wasted with waiting for my God.ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
4 Those who have hate for me without cause are greater in number than the hairs of my head; those who are against me, falsely desiring my destruction, are very strong; I gave back what I had not taken away.ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
5 O God, you see how foolish I am; and my wrongdoing is clear to you.ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
6 Let not those who have hope in you be put to shame because of me, O Lord God of armies: let not those who are waiting for you be made low because of me, O God of Israel.ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
7 I have been wounded with sharp words because of you; my face has been covered with shame.ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
8 I have become strange to my brothers, and like a man from a far country to my mother's children.ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
9 I am on fire with passion for your house; and the hard things which are said about you have come on me.ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
10 My bitter weeping, and my going without food, were turned to my shame.ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
11 When I put on the clothing of grief, they said evil of me.ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
12 I am a cause of wonder to those in authority; a song to those who are given to strong drink.ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
13 But as for me, let my prayer be made to you, O Lord, at a time when you are pleased; O God, give me an answer in your great mercy, for your salvation is certain.ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
14 Take me from the grip of the sticky earth, so that I may not go down into it; let me be lifted up from the deep waters.ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
15 Let me not be covered by the flowing waters; let not the deep waters go over my head, and let me not be shut up in the underworld.ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
16 Give an answer to my words, O Lord; for your mercy is good: be turned to me, because of your great pity.ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
17 Let not your face be covered from your servant, for I am in trouble; quickly give me an answer.ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
18 Come near to my soul, for its salvation: be my saviour, because of those who are against me.ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
19 You have seen my shame, how I was laughed at and made low; my haters are all before you.ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
20 My heart is broken by bitter words, I am full of grief; I made a search for some to have pity on me, but there was no one; I had no comforter.ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
21 They gave me poison for my food; and bitter wine for my drink.ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
22 Let their table before them be for their destruction; let their feasts become a net to take them.ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
23 Let their eyes be blind so that they may not see; let their bodies for ever be shaking.ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
24 Let your curse come on them; let the heat of your wrath overtake them.ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
25 Give their houses to destruction, and let there be no one in their tents.ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
26 Because they are cruel to him against whom your hand is turned; they make bitter the grief of him who is wounded by you.ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
27 Let their punishment be increased; let them not come into your righteousness.ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
28 Let their names be taken from the book of the living, let them not be numbered with the upright.ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
29 But I am poor and full of sorrow; let me be lifted up by your salvation, O Lord.ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
30 I will give praise to the name of God with a song; I will give glory to him for what he has done.ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
31 This will be more pleasing to the Lord than an ox, or a young ox of full growth.ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
32 The poor will see it and be glad: you who are lovers of God, let your hearts have life.ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
33 For the ears of the Lord are open to the poor, and he takes thought for his prisoners.ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
34 Let the heavens and the earth give praise to him, the seas, and everything moving in them.ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
35 For God will be the saviour of Zion, and the builder of the towns of Judah; so that it may be their resting-place and heritage.ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.
36 The seed of his servants will have their part in it, and there the lovers of his name will have rest.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Kannada Bible