Bible

Psalm 76 - ASV (Kannada)

1 In Judah is God known: His name is great in Israel.ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

2 In Salem also is his tabernacle, And his dwelling-place in Zion.ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.

3 There he brake the arrows of the bow; The shield, and the sword, and the battle. Selahಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.

4 Glorious art thou `and' excellent, From the mountains of prey.ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.

5 The stouthearted are made a spoil, They have slept their sleep; And none of the men of might have found their hands.ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

6 At thy rebuke, O God of Jacob, Both chariot and horse are cast into a deep sleep.ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.

7 Thou, even thou, art to be feared; And who may stand in thy sight when once thou art angry?ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

8 Thou didst cause sentence to be heard from heaven; The earth feared, and was still,ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.

9 When God arose to judgment, To save all the meek of the earth. Selahದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.

10 Surely the wrath of man shall praise thee: The residue of wrath shalt thou gird upon thee.ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

11 Vow, and pay unto Jehovah your God: Let all that are round about him bring presents unto him that ought to be feared.ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.

12 He will cut off the spirit of princes: He is terrible to the kings of the earth. Psalm 77 For the Chief Musician; after the manner of Jeduthan. A Psalm of Asaph.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.

Kannada Bible