Psalm 76 - YLT (Kannada)
1 To the Overseer with stringed instruments. -- A Psalm of Asaph. -- A Song. In Judah `is' God known, in Israel His name `is' great.ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
2 And His tabernacle is in Salem, And His habitation in Zion.ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
3 There he hath shivered arrows of a bow, Shield, and sword, and battle. Selah.ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
4 Bright `art' Thou, honourable above hills of prey.ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
5 Spoiled themselves have the mighty of heart, They have slept their sleep, And none of the men of might found their hands.ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
6 From Thy rebuke, O God of Jacob, Both rider and horse have been fast asleep.ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
7 Thou, fearful `art' Thou, And who doth stand before Thee, Since Thou hast been angry!ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
8 From heaven Thou hast sounded judgment, Earth hath feared, and hath been still,ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
9 In the rising of God to judgment, To save all the humble of earth. Selah.ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
10 For the fierceness of man praiseth Thee, The remnant of fierceness Thou girdest on.ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
11 Vow and complete to Jehovah your God, All ye surrounding him. They bring presents to the Fearful One.ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.
12 He doth gather the spirit of leaders, Fearful to the kings of earth!ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
Kannada Bible