Revelation 9
1 ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.
2 ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
3 ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
4 ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
5 ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.
6 ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
7 ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
8 ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
9 ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
11 ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
12 ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.