Romans 1 - DBY (Kannada)
1 Paul, bondman of Jesus Christ, [a] called apostle, separated to God's glad tidings,ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
2 (which he had before promised by his prophets in holy writings,)(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
3 concerning his Son (come of David's seed according to flesh,ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
4 marked out Son of God in power, according to [the] Spirit of holiness, by resurrection of [the] dead) Jesus Christ our Lord;ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
5 by whom we have received grace and apostleship in behalf of his name, for obedience of faith among all the nations,ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
6 among whom are *ye* also [the] called of Jesus Christ:ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
7 to all that are in Rome, beloved of God, called saints: Grace to you and peace from God our Father and [our] Lord Jesus Christ.ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
8 First, I thank my God through Jesus Christ for you all, that your faith is proclaimed in the whole world.ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
9 For God is my witness, whom I serve in my spirit in the glad tidings of his Son, how unceasingly I make mention of you,ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
10 always beseeching at my prayers, if any way now at least I may be prospered by the will of God to come to you.ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
11 For I greatly desire to see you, that I may impart to you some spiritual gift to establish you;ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
12 that is, to have mutual comfort among you, each by the faith [which is] in the other, both yours and mine.ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
13 But I do not wish you to be ignorant, brethren, that I often proposed to come to you, (and have been hindered until the present time,) that I might have some fruit among you too, even as among the other nations also.ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
14 I am a debtor both to Greeks and barbarians, both to wise and unintelligent:ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
15 so, as far as depends on me, am I ready to announce the glad tidings to you also who [are] in Rome.ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
16 For I am not ashamed of the glad tidings; for it is God's power to salvation, to every one that believes, both to Jew first and to Greek:ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
17 for righteousness of God is revealed therein, on the principle of faith, to faith: according as it is written, But the just shall live by faith.ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
18 For there is revealed wrath of God from heaven upon all impiety, and unrighteousness of men holding the truth in unrighteousness.ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
19 Because what is known of God is manifest among them, for God has manifested [it] to them,ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
20 -- for from [the] world's creation the invisible things of him are perceived, being apprehended by the mind through the things that are made, both his eternal power and divinity, -- so as to render them inexcusable.ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
21 Because, knowing God, they glorified [him] not as God, neither were thankful; but fell into folly in their thoughts, and their heart without understanding was darkened:ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
22 professing themselves to be wise, they became fools,ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
23 and changed the glory of the incorruptible God into [the] likeness of an image of corruptible man and of birds and quadrupeds and reptiles.ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
24 Wherefore God gave them up [also] in the lusts of their hearts to uncleanness, to dishonour their bodies between themselves:ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
25 who changed the truth of God into falsehood, and honoured and served the creature more than him who had created [it], who is blessed for ever. Amen.ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
26 For this reason God gave them up to vile lusts; for both their females changed the natural use into that contrary to nature;ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
27 and in like manner the males also, leaving the natural use of the female, were inflamed in their lust towards one another; males with males working shame, and receiving in themselves the recompense of their error which was fit.ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
28 And according as they did not think good to have God in [their] knowledge, God gave them up to a reprobate mind to practise unseemly things;ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
29 being filled with all unrighteousness, wickedness, covetousness, malice; full of envy, murder, strife, deceit, evil dispositions; whisperers,ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
30 back-biters, hateful to God, insolent, proud, boasters, inventors of evil things, disobedient to parents,ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
31 void of understanding, faithless, without natural affection, unmerciful;ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
32 who knowing the righteous judgment of God, that they who do such things are worthy of death, not only practise them, but have fellow delight in those who do [them].ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Kannada Bible