Romans 10 - YLT (Kannada)
1 Brethren, the pleasure indeed of my heart, and my supplication that `is' to God for Israel, is -- for salvation;ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
2 for I bear them testimony that they have a zeal of God, but not according to knowledge,ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
3 for not knowing the righteousness of God, and their own righteousness seeking to establish, to the righteousness of God they did not submit.ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
4 For Christ is an end of law for righteousness to every one who is believing,ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
5 for Moses doth describe the righteousness that `is' of the law, that, `The man who did them shall live in them,'ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
6 and the righteousness of faith doth thus speak: `Thou mayest not say in thine heart, Who shall go up to the heaven,' that is, Christ to bring down?ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
7 or, `Who shall go down to the abyss,' that is, Christ out of the dead to bring up.ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
8 But what doth it say? `Nigh thee is the saying -- in thy mouth, and in thy heart:' that is, the saying of the faith, that we preach;ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 that if thou mayest confess with thy mouth the Lord Jesus, and mayest believe in thy heart that God did raise him out of the dead, thou shalt be saved,ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
10 for with the heart doth `one' believe to righteousness, and with the mouth is confession made to salvation;ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
11 for the Writing saith, `Every one who is believing on him shall not be ashamed,'ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
12 for there is no difference between Jew and Greek, for the same Lord of all `is' rich to all those calling upon Him,ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
13 for every one -- whoever shall call upon the name of the Lord, he shall be saved.'ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
14 How then shall they call upon `him' in whom they did not believe? and how shall they believe `on him' of whom they did not hear? and how shall they hear apart from one preaching?ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
15 and how shall they preach, if they may not be sent? according as it hath been written, `How beautiful the feet of those proclaiming good tidings of peace, of those proclaiming good tidings of the good things!'ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
16 But they were not all obedient to the good tidings, for Isaiah saith, `Lord, who did give credence to our report?'ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
17 so then the faith `is' by a report, and the report through a saying of God,ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
18 but I say, Did they not hear? yes, indeed -- `to all the earth their voice went forth, and to the ends of the habitable world their sayings.'ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
19 But I say, Did not Israel know? first Moses saith, `I will provoke you to jealousy by `that which is' not a nation; by an unintelligent nation I will anger you,'ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
20 and Isaiah is very bold, and saith, `I was found by those not seeking Me; I became manifest to those not inquiring after Me;'ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
21 and unto Israel He saith, `All the day I did stretch out My hands unto a people unbelieving and gainsaying.'ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Kannada Bible