Bible

Romans 14 - ASV (Kannada)

1 But him that is weak in faith receive ye, `yet' not for decision of scruples.ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.

2 One man hath faith to eat all things: but he that is weak eateth herbs.ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;

3 Let not him that eateth set at nought him that eateth not; and let not him that eateth not judge him that eateth: for God hath received him.ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.

4 Who art thou that judgest the servant of another? to his own lord he standeth or falleth. Yea, he shall be made to stand; for the Lord hath power to make him stand.ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.

5 One man esteemeth one day above another: another esteemeth every day `alike'. Let each man be fully assured in his own mind.ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.

6 He that regardeth the day, regardeth it unto the Lord: and he that eateth, eateth unto the Lord, for he giveth God thanks; and he that eateth not, unto the Lord he eateth not, and giveth God thanks.ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

7 For none of us liveth to himself, and none dieth to himself.ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

8 For whether we live, we live unto the Lord; or whether we die, we die unto the Lord: whether we live therefore, or die, we are the Lord's.ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

9 For to this end Christ died and lived `again', that he might be Lord of both the dead and the living.ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

10 But thou, why dost thou judge thy brother? or thou again, why dost thou set at nought thy brother? for we shall all stand before the judgment-seat of God.ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.

11 For it is written, As I live, saith the Lord, to me every knee shall bow, And every tongue shall confess to God.ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.

12 So then each one of us shall give account of himself to God.ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.

13 Let us not therefore judge one another any more: but judge ye this rather, that no man put a stumblingblock in his brother's way, or an occasion of falling.ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.

14 I know, and am persuaded in the Lord Jesus, that nothing is unclean of itself: save that to him who accounteth anything to be unclean, to him it is unclean.ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.

15 For if because of meat thy brother is grieved, thou walkest no longer in love. Destroy not with thy meat him for whom Christ died.ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.

16 Let not then your good be evil spoken of:ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.

17 for the kingdom of God is not eating and drinking, but righteousness and peace and joy in the Holy Spirit.ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

18 For he that herein serveth Christ is well-pleasing to God, and approved of men.ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

19 So then let us follow after things which make for peace, and things whereby we may edify one another.ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.

20 Overthrow not for meat's sake the work of God. All things indeed are clean; howbeit it is evil for that man who eateth with offence.ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

21 It is good not to eat flesh, nor to drink wine, nor `to do anything' whereby thy brother stumbleth.ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

22 The faith which thou hast, have thou to thyself before God. Happy is he that judgeth not himself in that which he approveth.ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.

23 But he that doubteth is condemned if he eat, because `he eateth' not of faith; and whatsoever is not of faith is sin.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

Kannada Bible