Ruth 1 - WEB (Kannada)
1 It happened in the days when the judges judged, that there was a famine in the land. A certain man of Bethlehem Judah went to sojourn in the country of Moab, he, and his wife, and his two sons.1 ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
2 The name of the man was Elimelech, and the name of his wife Naomi, and the name of his two sons Mahlon and Chilion, Ephrathites of Bethlehem Judah. They came into the country of Moab, and continued there.ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
3 Elimelech, Naomi's husband, died; and she was left, and her two sons.ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
4 They took them wives of the women of Moab; the name of the one was Orpah, and the name of the other Ruth: and they lived there about ten years.ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
5 Mahlon and Chilion died both of them; and the woman was left of her two children and of her husband.ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
6 Then she arose with her daughters-in-law, that she might return from the country of Moab: for she had heard in the country of Moab how that Yahweh had visited his people in giving them bread.ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
7 She went forth out of the place where she was, and her two daughters-in-law with her; and they went on the way to return to the land of Judah.ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ
8 Naomi said to her two daughters-in-law, Go, return each of you to her mother's house: Yahweh deal kindly with you, as you have dealt with the dead, and with me.ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
9 Yahweh grant you that you may find rest, each of you in the house of her husband. Then she kissed them, and they lifted up their voice, and wept.ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
10 They said to her, No, but we will return with you to your people.ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
11 Naomi said, Turn again, my daughters: why will you go with me? have I yet sons in my womb, that they may be your husbands?ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
12 Turn again, my daughters, go your way; for I am too old to have a husband. If I should say, I have hope, if I should even have a husband tonight, and should also bear sons;ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
13 would you therefore wait until they were grown? would you therefore stay from having husbands? nay, my daughters, for it grieves me much for your sakes, for the hand of Yahweh is gone forth against me.ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
14 They lifted up their voice, and wept again: and Orpah kissed her mother-in-law, but Ruth joined with her.ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
15 She said, Behold, your sister-in-law is gone back to her people, and to her god: return you after your sister-in-law.ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
16 Ruth said, "Don't entreat me to leave you, and to return from following after you, for where you go, I will go; and where you lodge, I will lodge; your people shall be my people, and your God my God;ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
17 where you die, will I die, and there will I be buried: Yahweh do so to me, and more also, if anything but death part you and me."ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
18 When she saw that she was steadfastly minded to go with her, she left off speaking to her.ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.
19 So they two went until they came to Bethlehem. It happened, when they were come to Bethlehem, that all the city was moved about them, and [the women] said, Is this Naomi?ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
20 She said to them, "Don't call me Naomi, call me Mara; for the Almighty has dealt very bitterly with me.ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
21 I went out full, and Yahweh has brought me home again empty; why do you call me Naomi, seeing Yahweh has testified against me, and the Almighty has afflicted me?"ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.
22 So Naomi returned, and Ruth the Moabitess, her daughter-in-law, with her, who returned out of the country of Moab: and they came to Bethlehem in the beginning of barley harvest.ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
Kannada Bible