Hebrews 7 - BBE (Kannada)
1 For this Melchizedek, the king of Salem, a priest of the Most High God, who gave Abraham his blessing, meeting him when he came back after putting the kings to death,ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
2 And to whom Abraham gave a tenth part of everything which he had, being first named King of righteousness, and then in addition, King of Salem, that is to say, King of peace;ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
3 Being without father or mother, or family, having no birth or end to his life, being made like the Son of God, is a priest for ever.ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
4 Now see how great this man was, to whom our father Abraham gave a tenth part of what he had got in the fight.ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
5 And it is true that by the law, those of the sons of Levi who have the position of priests may take a tenth part of the people's goods; that is to say, they take it from their brothers though these are the sons of Abraham.ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
6 But this man, who was not of their family, took the tenth from Abraham, and gave a blessing to him to whom God had given his undertaking.ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
7 But there is no doubt that the less gets his blessing from the greater.ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.
8 Now at the present time, men over whom death has power take the tenth; but then it was taken by one of whom it is witnessed that he is living.ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
9 And we may say that in Abraham, even Levi, who has a right to take the tenth part, gave it;ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
10 Because he was still in his father's body when Melchizedek came to him.ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
11 Now if it was possible for things to be made complete through the priests of the house of Levi (for the law was given to the people in connection with them), what need was there for another priest who was of the order of Melchizedek and not of the order of Aaron?ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
12 Because if the priests are changed, it is necessary to make a change in the law.ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
13 For he of whom these things are said comes of another tribe, of which no man has ever made offerings at the altar.ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
14 Because it is clear that our Lord comes out of Judah, and Moses said nothing about priests from that tribe.ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
15 And this is even more clear if a second priest has come up who is like Melchizedek,ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
16 That is to say, not made by a law based on the flesh, but by the power of a life without end:ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
17 For it has been witnessed of him, You are a priest for ever after the order of Melchizedek.ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
18 So the law which went before is put on one side, because it was feeble and without profit.ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
19 (Because the law made nothing complete), and in its place there is a better hope, through which we come near to God.ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
20 And as this is not without the taking of an oathಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
21 (For those were made priests without an oath, but this one was made a priest with an oath by him who says of him, The Lord gave his oath, which he will not take back, that you are a priest for ever);(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
22 By so much is it a better agreement which we have through Jesus.ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
23 And it is true that there have been a great number of those priests, because death does not let them go on for ever;ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
24 But this priest, because his life goes on for ever, is unchanging.ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
25 So that he is fully able to be the saviour of all who come to God through him, because he is ever living to make prayer to God for them.ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
26 It was right for us to have such a high priest, one who is holy and without evil, doing no wrong, having no part with sinners, and made higher than the heavens:ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
27 Who has no need to make offerings for sins every day, like those high priests, first for himself, and then for the people; because he did this once and for ever when he made an offering of himself.ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
28 The law makes high priests of men who are feeble; but the word of the oath, which was made after the law, gives that position to a Son, in whom all good is for ever complete.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Kannada Bible