Hebrews 9:22 ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
Hebrews 9:22 in Other Translations
King James Version (KJV) And almost all things are by the law purged with blood; and without shedding of blood is no remission.
American Standard Version (ASV) And according to the law, I may almost say, all things are cleansed with blood, and apart from shedding of blood there is no remission.
Bible in Basic English (BBE) And by the law almost all things are made clean with blood, and without blood there is no forgiveness.
Darby English Bible (DBY) and almost all things are purified with blood according to the law, and without blood-shedding there is no remission.
World English Bible (WEB) According to the law, nearly everything is cleansed with blood, and apart from shedding of blood there is no remission.
Young's Literal Translation (YLT) and with blood almost all things are purified according to the law, and apart from blood-shedding forgiveness doth not come.
And
καὶ
kai
kay
almost
σχεδὸν
schedon
skay-THONE
with
ἐν
en
ane
blood;
αἵματι
haima
AY-ma
all things
πάντα
pas
pahs
are purged
καθαρίζεται
katharizō
ka-tha-REE-zoh
by
κατὰ
kata
ka-TA
the
τὸν
ho
oh
law
νόμον
nomos
NOH-mose
and
καὶ
kai
kay
without
χωρὶς
chōris
hoh-REES
shedding of blood
αἱματεκχυσίας
haimatekchysia
ay-ma-take-hyoo-SEE-ah
no
οὐ
ou
oo
is
γίνεται
ginomai
GEE-noh-may
remission.
ἄφεσις
aphesis
AH-fay-sees
Read Full Chapter :
Hebrews 9
Cross Reference
ಯಾಜಕಕಾಂಡ 17:11
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ಯಾಜಕಕಾಂಡ 6:7
ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
ಯಾಜಕಕಾಂಡ 4:26
ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 4:35
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 5:10
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 5:12
ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
ಯಾಜಕಕಾಂಡ 5:18
ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.
ಯಾಜಕಕಾಂಡ 14:6
ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
ಯಾಜಕಕಾಂಡ 14:14
ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
ಯಾಜಕಕಾಂಡ 14:25
ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
ಯಾಜಕಕಾಂಡ 14:51
ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
ಯಾಜಕಕಾಂಡ 4:20
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.