Psalm 26:8
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
Psalm 26:8 in Other Translations
King James Version (KJV)
LORD, I have loved the habitation of thy house, and the place where thine honour dwelleth.
American Standard Version (ASV)
Jehovah, I love the habitation of thy house, And the place where thy glory dwelleth.
Bible in Basic English (BBE)
Lord, your house has been dear to me, and the resting-place of your glory.
Darby English Bible (DBY)
Jehovah, I have loved the habitation of thy house, and the place where thy glory dwelleth.
Webster's Bible (WBT)
LORD, I have loved the habitation of thy house, and the place where thy honor dwelleth.
World English Bible (WEB)
Yahweh, I love the habitation of your house, The place where your glory dwells.
Young's Literal Translation (YLT)
Jehovah, I have loved the habitation of Thy house, And the place of the tabernacle of Thine honour.
| Lord, | יְֽהוָ֗ה | yĕhwâ | yeh-VA |
| I have loved | אָ֭הַבְתִּי | ʾāhabtî | AH-hahv-tee |
| the habitation | מְע֣וֹן | mĕʿôn | meh-ONE |
| house, thy of | בֵּיתֶ֑ךָ | bêtekā | bay-TEH-ha |
| and the place | וּ֝מְק֗וֹם | ûmĕqôm | OO-meh-KOME |
| where thine honour | מִשְׁכַּ֥ן | miškan | meesh-KAHN |
| dwelleth. | כְּבוֹדֶֽךָ׃ | kĕbôdekā | keh-voh-DEH-ha |
Cross Reference
ಯೋಹಾನನು 2:14
ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
ಲೂಕನು 2:49
ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
ಲೂಕನು 19:45
ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
ಲೂಕನು 2:46
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಯೆಶಾಯ 38:22
ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
ಯೆಶಾಯ 38:20
ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
ಕೀರ್ತನೆಗಳು 122:9
ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
ಕೀರ್ತನೆಗಳು 122:1
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
ಕೀರ್ತನೆಗಳು 84:10
ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
ಕೀರ್ತನೆಗಳು 84:1
ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
ಕೀರ್ತನೆಗಳು 63:2
ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
ಕೀರ್ತನೆಗಳು 42:4
ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
ಕೀರ್ತನೆಗಳು 27:4
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
2 ಪೂರ್ವಕಾಲವೃತ್ತಾ 5:14
ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
1 ಪೂರ್ವಕಾಲವೃತ್ತಾ 29:3
ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
2 ಸಮುವೇಲನು 15:25
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ವಿಮೋಚನಕಾಂಡ 40:34
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ವಿಮೋಚನಕಾಂಡ 25:21
ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.