Romans 15 - BBE (Kannada)
1 We who are strong have to be a support to the feeble, and not give pleasure to ourselves.ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
2 Let every one of us give pleasure to his neighbour for his good, to make him strong.ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
3 For Christ did not give pleasure to himself, but, as it is said, The bitter words of those who were angry with you came on me.ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
4 Now those things which were put down in writing before our time were for our learning, so that through quiet waiting and through the comfort of the holy Writings we might have hope.ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
5 Now may the God who gives comfort and strength in waiting make you of the same mind with one another in harmony with Christ Jesus:ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
6 So that with one mouth you may give glory to the God and Father of our Lord Jesus Christ.ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
7 So then, take one another to your hearts, as Christ took us, to the glory of God.ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
8 Now I say that Christ has been made a servant of the circumcision to give effect to the undertakings given by God to the fathers,ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
9 And so that the Gentiles might give glory to God for his mercy; as it is said, For this reason I will give praise to you among the Gentiles, and I will make a song to your name.ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
10 And again he says, Take part, you Gentiles, in the joy of his people.ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
11 And again, Give praise to the Lord, all you Gentiles; and let all the nations give praise to him.ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
12 And again Isaiah says, There will be the root of Jesse, and he who comes to be the ruler over the Gentiles; in him will the Gentiles put their hope.ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
13 Now may the God of hope make you full of joy and peace through faith, so that all hope may be yours in the power of the Holy Spirit.ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
14 And I myself am certain of you, brothers, that you are full of what is good, complete in all knowledge, able to give direction to one another.ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
15 But I have, in some measure, less fear in writing to you to put these things before you again, because of the grace which was given to me by God,ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
16 To be a servant of Christ Jesus to the Gentiles, doing the work of a priest in the good news of God, so that the offering of the Gentiles might be pleasing to God, being made holy by the Holy Spirit.ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
17 So I have pride in Christ Jesus in the things which are God's.ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
18 And I will keep myself from talking of anything but those things which Christ has done by me to put the Gentiles under his rule in word and in act,ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
19 By signs and wonders, in the power of the Holy Spirit; so that from Jerusalem and round about as far as Illyricum I have given all the good news of Christ;ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
20 Making it my purpose not to take the good news where Christ was named, so that my work might not be resting on that of others;ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
21 But as it is said in the holy Writings, They will see, to whom the news of him had not been given, and those to whose ears it had not come will have knowledge.ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
22 For which reason I was frequently kept from coming to you:ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
23 But now, having no longer any place in these parts and having had for a number of years a great desire to come to you,ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
24 Whenever I go to Spain (for it is my hope to see you on my way, and to be sent on there by you, if first I may in some measure have been comforted by your company)--ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
25 But now I go to Jerusalem, taking help for the saints.ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
26 For it has been the good pleasure of those of Macedonia and Achaia to send a certain amount of money for the poor among the saints at Jerusalem.ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
27 Yes, it has been their good pleasure; and they are in their debt. For if the Gentiles have had a part in the things of the Spirit which were theirs, it is right for them, in the same way, to give them help in the things of the flesh.ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
28 So when I have done this, and have given them this fruit of love, I will go on by you into Spain.ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
29 And I am certain that when I come, I will be full of the blessing of Christ.ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
30 Now I make request to you, brothers, by our Lord Jesus Christ, and by the love of the Spirit, that you will be working together with me in your prayers to God for me;ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
31 So that I may be kept safe from those in Judaea who have not put themselves under the rule of God, and that the help which I am taking for Jerusalem may be pleasing to the saints;ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
32 So that I may come to you in joy by the good pleasure of God, and have rest with you.ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.
33 Now may the God of peace be with you all. So be it.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
Kannada Bible