No lexicon data found for Strong's number: 1689

ಮತ್ತಾಯನು 6:26
ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

ಮತ್ತಾಯನು 19:26
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.

ಮಾರ್ಕನು 8:25
ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.

ಮಾರ್ಕನು 10:21
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ

ಮಾರ್ಕನು 10:27
ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.

ಮಾರ್ಕನು 14:67
ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.

ಲೂಕನು 20:17
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?

ಲೂಕನು 22:61
ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.

ಯೋಹಾನನು 1:36
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.

ಯೋಹಾನನು 1:42
ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).

Occurences : 12

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்