ಮತ್ತಾಯನು 2:2
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಮತ್ತಾಯನು 2:8
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ಮತ್ತಾಯನು 2:11
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಮತ್ತಾಯನು 4:9
ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
ಮತ್ತಾಯನು 4:10
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಮತ್ತಾಯನು 8:2
ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
ಮತ್ತಾಯನು 9:18
ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
ಮತ್ತಾಯನು 14:33
ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
ಮತ್ತಾಯನು 15:25
ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
ಮತ್ತಾಯನು 18:26
ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
Occurences : 60
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்