Bible

Acts 16 - ASV (Kannada)

1 And he came also to Derbe and to Lystra: and behold, a certain disciple was there, named Timothy, the son of a Jewess that believed; but his father was a Greek.ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.

2 The same was well reported of by the brethren that were at Lystra and Iconium.ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.

3 Him would Paul have to go forth with him; and he took and circumcised him because of the Jews that were in those parts: for they all knew that his father was a Greek.ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

4 And as they went on their way through the cities, they delivered them the decrees to keep which had been ordained of the apostles and elders that were at Jerusalem.ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

5 So the churches were strengthened in the faith, and increased in number daily.ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.

6 And they went through the region of Phrygia and Galatia, having been forbidden of the Holy Spirit to speak the word in Asia;ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ

7 and when they were come over against Mysia, they assayed to go into Bithynia; and the Spirit of Jesus suffered them not;ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

8 and passing by Mysia, they came down to Troas.ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.

9 And a vision appeared to Paul in the night: There was a man of Macedonia standing, beseeching him, and saying, Come over into Macedonia, and help us.ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.

10 And when he had seen the vision, straightway we sought to go forth into Macedonia, concluding that God had called us to preach the gospel to them.ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

11 Setting sail therefore from Troas, we made a straight course to Samothrace, and the day following to Neapolis;ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

12 and from thence to Philippi, which is a city of Macedonia, the first of the district, a `Roman' colony: and we were in this city tarrying certain days.ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

13 And on the sabbath day we went forth without the gate by a river side, where we supposed there was a place of prayer; and we sat down, and spake unto the women that were come together.ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

14 And a certain woman named Lydia, a seller of purple of the city of Thyatira, one that worshipped God, heard us: whose heart the Lord opened to give heed unto the things which were spoken by Paul.ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

15 And when she was baptized, and her household, she besought us, saying, If ye have judged me to be faithful to the Lord, come into my house, and abide `there'. And she constrained us.ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

16 And it came to pass, as we were going to the place of prayer, that a certain maid having a spirit of divination met us, who brought her masters much gain by soothsaying.ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.

17 The same following after Paul and us cried out, saying, These men are servants of the Most High God, who proclaim unto you the way of salvation.ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

18 And this she did for many days. But Paul, being sore troubled, turned and said to the spirit, I charge thee in the name of Jesus Christ to come out of her. And it came out that very hour.ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.

19 But when her masters saw that the hope of their gain was gone, they laid hold on Paul and Silas, and dragged them into the marketplace before the rulers,ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.

20 and when they had brought them unto the magistrates, they said, These men, being Jews, do exceedingly trouble our city,ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.

21 and set forth customs which it is not lawful for us to receive, or to observe, being Romans.ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.

22 And the multitude rose up together against them: and the magistrates rent their garments off them, and commanded to beat them with rods.ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.

23 And when they had laid many stripes upon them, they cast them into prison, charging the jailor to keep them safely:ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

24 who, having received such a charge, cast them into the inner prison, and made their feet fast in the stocks.ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.

25 But about midnight Paul and Silas were praying and singing hymns unto God, and the prisoners were listening to them;ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.

26 and suddenly there was a great earthquake, so that the foundations of the prison-house were shaken: and immediately all the doors were opened, and every one's bands were loosed.ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

27 And the jailor, being roused out of sleep and seeing the prison doors open, drew his sword and was about to kill himself, supposing that the prisoners had escaped.ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.

28 But Paul cried with a loud voice, saying, Do thyself no harm: for we are all here.ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.

29 And he called for lights and sprang in, and, trembling for fear, fell down before Paul and Silas,ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.

30 and brought them out and said, Sirs, what must I do to be saved?ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

31 And they said, Believe on the Lord Jesus, and thou shalt be saved, thou and thy house.ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.

32 And they spake the word of the Lord unto him, with all that were in his house.ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.

33 And he took them the same hour of the night, and washed their stripes; and was baptized, he and all his, immediately.ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.

34 And he brought them up into his house, and set food before them, and rejoiced greatly, with all his house, having believed in God.ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.

35 But when it was day, the magistrates sent the sergeants, saying, Let those men go.ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.

36 And the jailor reported the words to Paul, `saying', The magistrates have sent to let you go: now therefore come forth, and go in peace.ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.

37 But Paul said unto them, They have beaten us publicly, uncondemned, men that are Romans, and have cast us into prison; and do they now cast us out privily? Nay verily; but let them come themselves and bring us out.ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ

38 And the sergeants reported these words unto the magistrates: and they feared when they heard that they were Romans;ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.

39 and they came and besought them; and when they had brought them out, they asked them to go away from the city.ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.

40 And they went out of the prison, and entered into `the house' of Lydia: and when they had seen the brethren, they comforted them, and departed.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.

Kannada Bible