Bible

Zechariah 13 - YLT (Kannada)

1 In that day there is a fountain opened To the house of David And to the inhabitants of Jerusalem, For sin and for impurity.ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.

2 And it hath come to pass, in that day, An affirmation of Jehovah of Hosts, I cut off the names of the idols from the land, And they are not remembered any more, And also the prophets and the spirit of uncleanness I cause to pass away from the land.ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.

3 And it hath been, when one prophesieth again, That said unto him have his father and his mother, his parents, `Thou dost not live, For falsehood thou hast spoken in the name of Jehovah,' And pierced him through have his father and his mother, his parents, in his prophesying.ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.

4 And it hath come to pass, in that day, Ashamed are the prophets, each of his vision, in his prophesying, And they put not on a hairy robe to deceive.ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.

5 And `one' hath said, `I am not a prophet, A man, a tiller of ground I am, For ground `is' my possession from my youth.'ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.

6 And `one' hath said unto him, `What `are' these wounds in thy hands?' And he hath said, `Because I was smitten `at' home by my lovers.'ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.

7 Sword, awake against My shepherd, And against a hero -- My fellow, An affirmation of Jehovah of Hosts. Smite the shepherd, and scattered is the flock, And I have put back My hand on the little ones.ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

8 And it hath come to pass, In all the land, an affirmation of Jehovah, Two parts in it are cut off -- they expire, And the third is left in it.ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.

9 And I have brought the third into fire, And refined them like a refining of silver, And have tried them like a trying of gold, It doth call in My name, and I answer it, I have said, `My people it `is',' And it saith, `Jehovah `is' my God!'ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

Kannada Bible