Bible

Zechariah 3 - WEB (Kannada)

1 He showed me Joshua the high priest standing before the angel of Yahweh, and Satan standing at his right hand to be his adversary.ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.

2 Yahweh said to Satan, "Yahweh rebuke you, Satan! Yes, Yahweh who has chosen Jerusalem rebuke you! Isn't this a burning stick plucked out of the fire?"ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.

3 Now Joshua was clothed with filthy garments, and was standing before the angel.ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.

4 He answered and spoke to those who stood before him, saying, "Take the filthy garments off of him." To him he said, "Behold, I have caused your iniquity to pass from you, and I will clothe you with rich clothing."ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.

5 I said, "Let them set a clean turban on his head." So they set a clean turban on his head, and clothed him; and the angel of Yahweh was standing by.ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.

6 The angel of Yahweh protested to Joshua, saying,ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--

7 "Thus says Yahweh of hosts: 'If you will walk in my ways, and if you will keep my charge, then you also shall judge my house, and shall also keep my courts, and I will give you a place of access among these who stand by.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.

8 Hear now, Joshua the high priest, you and your fellows who sit before you; for they are men who are a sign: for, behold, I will bring forth my servant, the Branch.ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

9 For, behold, the stone that I have set before Joshua; on one stone are seven eyes: behold, I will engrave the engraving of it,' says Yahweh of Hosts, 'and I will remove the iniquity of that land in one day.ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

10 In that day,' says Yahweh of hosts, 'you will invite every man his neighbor under the vine and under the fig tree.'"ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

Kannada Bible