Zechariah 7 - WEB (Kannada)
1 It happened in the fourth year of king Darius that the word of Yahweh came to Zechariah in the fourth day of the ninth month, the month of Chislev.ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
2 The people of Bethel sent Sharezer and Regem Melech, and their men, to entreat Yahweh's favor,ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
3 and to speak to the priests of the house of Yahweh of Hosts, and to the prophets, saying, "Should I weep in the fifth month, separating myself, as I have done these so many years?"ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
4 Then the word of Yahweh of Hosts came to me, saying,ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
5 "Speak to all the people of the land, and to the priests, saying, 'When you fasted and mourned in the fifth and in the seventh month for these seventy years, did you at all fast to me, really to me?ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
6 When you eat, and when you drink, don't you eat for yourselves, and drink for yourselves?ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
7 Aren't these the words which Yahweh proclaimed by the former prophets, when Jerusalem was inhabited and in prosperity, and its cities around her, and the South and the lowland were inhabited?'"ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
8 The word of Yahweh came to Zechariah, saying,ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
9 "Thus has Yahweh of Hosts spoken, saying, 'Execute true judgment, and show kindness and compassion every man to his brother.ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
10 Don't oppress the widow, nor the fatherless, the foreigner, nor the poor; and let none of you devise evil against his brother in your heart.'ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
11 But they refused to listen, and turned their backs, and stopped their ears, that they might not hear.ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
12 Yes, they made their hearts as hard as flint, lest they might hear the law, and the words which Yahweh of Hosts had sent by his Spirit by the former prophets. Therefore great wrath came from Yahweh of Hosts.ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
13 It has come to pass that, as he called, and they refused to listen, so they will call, and I will not listen," said Yahweh of Hosts;ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
14 "but I will scatter them with a whirlwind among all the nations which they have not known. Thus the land was desolate after them, so that no man passed through nor returned: for they made the pleasant land desolate."ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Kannada Bible