Zechariah 9 - WEB (Kannada)
1 An oracle. The word of Yahweh is against the land of Hadrach, And will rest upon Damascus; For the eye of man And of all the tribes of Israel is toward Yahweh;ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
2 And Hamath, also, which borders on it; Tyre and Sidon, because they are very wise.ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
3 Tyre built herself a stronghold, And heaped up silver like the dust, And fine gold like the mire of the streets.ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
4 Behold, the Lord will dispossess her, And he will strike her power in the sea; And she will be devoured with fire.ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
5 Ashkelon will see it, and fear; Gaza also, and will writhe in agony; As will Ekron, for her expectation will be disappointed; And the king will perish from Gaza, And Ashkelon will not be inhabited.ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
6 Foriegners will dwell in Ashdod, And I will cut off the pride of the Philistines.ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
7 I will take away his blood out of his mouth, And his abominations from between his teeth; And he also will be a remnant for our God; And he will be as a chieftain in Judah, And Ekron as a Jebusite.ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
8 I will encamp around my house against the army, That none pass through or return; And no oppressor will pass through them any more: For now I have seen with my eyes.ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
9 Rejoice greatly, daughter of Zion! Shout, daughter of Jerusalem! Behold, your king comes to you! He is righteous, and having salvation; Lowly, and riding on a donkey, Even on a colt, the foal of a donkey.ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
10 I will cut off the chariot from Ephraim, And the horse from Jerusalem; And the battle bow will be cut off; And he will speak peace to the nations: And his dominion will be from sea to sea, And from the River to the ends of the earth.ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
11 As for you also, Because of the blood of your covenant, I have set free your prisoners from the pit in which is no water.ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
12 Turn to the stronghold, you prisoners of hope! Even today I declare that I will restore double to you.ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
13 For indeed I bend Judah as a bow for me. I have filled the bow with Ephraim; And I will stir up your sons, Zion, Against your sons, Greece, And will make you like the sword of a mighty man.ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
14 Yahweh will be seen over them; And his arrow will go flash like lightning; And the Lord Yahweh will blow the trumpet, And will go with whirlwinds of the south.ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
15 Yahweh of Hosts will defend them; And they will destroy and overcome with sling-stones; And they will drink, and roar as through wine; And they will be filled like bowls, Like the corners of the altar.ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
16 Yahweh their God will save them in that day as the flock of his people; For they are like the jewels of a crown, Lifted on high over his land.ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.
17 For how great is his goodness, And how great is his beauty! Grain will make the young men flourish, And new wine the virgins.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Kannada Bible